21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.
24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.