2 ಕೊರಿಂಥ 1

ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.

2 Corinthians 1:4 (UKJV) Who comforts us in all our tribulation, that we may be able to comfort them which are in any trouble, by the comfort wherewith we ourselves are comforted of God.

2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.

4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.

5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.

6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.

Kannada Bible (Old Version), Bible Society of India.