13ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
15ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
16ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.