4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
8ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.