2 ಕೊರಿಂಥ 6

ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.

2 Corinthians 6:17 (UKJV) Wherefore come out from among them, and be all of you separate, says the Lord, and touch not the unclean thing; and I will receive you.

15ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?

16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.

17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.

18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

Kannada Bible (Old Version), Bible Society of India.