2 ಕೊರಿಂಥ 7

ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.

2 Corinthians 7:2 (UKJV) Receive us; we have wronged no man, we have corrupted no man, we have defrauded no man.

1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.

2ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.

3ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.

4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.

Kannada Bible (Old Version), Bible Society of India.