1ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
2ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
3ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.