2 ರಾಜರು 10

ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.

2 Kings 10:27 (UKJV) And they brake down the image of Baal, and brake down the house of Baal, and made it a draught house unto this day.

25ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.

26ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.

27ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.

28ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.

29ಆದರೆ ಬೇತೇಲ್‌, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.

Kannada Bible (Old Version), Bible Society of India.