2 ರಾಜರು 13

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.

2 Kings 13:11 (UKJV) And he did that which was evil in the sight of the LORD; he departed not from all the sins of Jeroboam the son of Nebat, who made Israel sin: but he walked therein.

9ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.

10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.

11ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.

12ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

13ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.

Kannada Bible (Old Version), Bible Society of India.