2 ರಾಜರು 13

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.

2 Kings 13:2 (UKJV) And he did that which was evil in the sight of the LORD, and followed the sins of Jeroboam the son of Nebat, which made Israel to sin; he departed not from it.

1ಯೆಹೂದದ ಅರಸನಾಗಿರುವ ಅಹಜ್ಯನಮಗನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನೇಳು ವರುಷ ಆಳಿದನು.

2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.

3ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.

4ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.

Kannada Bible (Old Version), Bible Society of India.