2 ರಾಜರು 13

ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.

2 Kings 13:23 (UKJV) And the LORD was gracious unto them, and had compassion on them, and had respect unto them, because of his covenant with Abraham, Isaac, and Jacob, and would not destroy them, neither cast he them from his presence as yet.

21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.

22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.

23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.

24ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.

25ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.

Kannada Bible (Old Version), Bible Society of India.