2 ರಾಜರು 13

ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.

2 Kings 13:4 (UKJV) And Jehoahaz besought the LORD, and the LORD hearkened unto him: for he saw the oppression of Israel, because the king of Syria oppressed them.

2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.

3ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.

4ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.

5ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್‌ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.

6ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.

Kannada Bible (Old Version), Bible Society of India.