7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
8ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
9ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
11ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.