2 ರಾಜರು 14

ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.

2 Kings 14:11 (UKJV) But Amaziah would not hear. Therefore Jehoash king of Israel went up; and he and Amaziah king of Judah looked one another in the face at Bethshemesh, which belongs to Judah.

9ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.

10ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.

11ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.

12ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.

13ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು

Kannada Bible (Old Version), Bible Society of India.