2 ರಾಜರು 14

ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 Kings 14:18 (UKJV) And the rest of the acts of Amaziah, are they not written in the book of the chronicles of the kings of Judah?

16ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.

17ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.

18ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.

20ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.

Kannada Bible (Old Version), Bible Society of India.