2 ರಾಜರು 14

ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.

2 Kings 14:25 (UKJV) He restored the coast of Israel from the entering of Hamath unto the sea of the plain, according to the word of the LORD God of Israel, which he spoke by the hand of his servant Jonah, the son of Amittai, the prophet, which was of Gathhepher.

23ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.

24ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.

25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.

26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.

27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.

Kannada Bible (Old Version), Bible Society of India.