2 ರಾಜರು 14

ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.

2 Kings 14:26 (UKJV) For the LORD saw the affliction of Israel, that it was very bitter: for there was not any shut up, nor any left, nor any helper for Israel.

24ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.

25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.

26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.

27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.

28ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?

Kannada Bible (Old Version), Bible Society of India.