2 ರಾಜರು 14

ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.

2 Kings 14:27 (UKJV) And the LORD said not that he would blot out the name of Israel from under heaven: but he saved them by the hand of Jeroboam the son of Joash.

25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.

26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.

27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.

28ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?

29ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.

Kannada Bible (Old Version), Bible Society of India.