2 ರಾಜರು 15

ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.

2 Kings 15:13 (UKJV) Shallum the son of Jabesh began to reign in the nine and thirtieth year of Uzziah king of Judah; and he reigned a full month in Samaria.

11ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

12ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.

13ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.

14ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.

15ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

Kannada Bible (Old Version), Bible Society of India.