2 ರಾಜರು 15

ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.

2 Kings 15:17 (UKJV) In the nine and thirtieth year of Azariah king of Judah began Menahem the son of Gadi to reign over Israel, and reigned ten years in Samaria.

15ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

16ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.

17ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.

18ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.

Kannada Bible (Old Version), Bible Society of India.