2 ರಾಜರು 15

ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

2 Kings 15:18 (UKJV) And he did that which was evil in the sight of the LORD: he departed not all his days from the sins of Jeroboam the son of Nebat, who made Israel to sin.

16ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.

17ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.

18ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.

20ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.

Kannada Bible (Old Version), Bible Society of India.