2 ರಾಜರು 15

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

2 Kings 15:28 (UKJV) And he did that which was evil in the sight of the LORD: he departed not from the sins of Jeroboam the son of Nebat, who made Israel to sin.

26ಇಗೋ, ಪೆಕಹನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

27ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.

28ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.

Kannada Bible (Old Version), Bible Society of India.