2 ರಾಜರು 15

ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.

2 Kings 15:3 (UKJV) And he did that which was right in the sight of the LORD, according to all that his father Amaziah had done;

1ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು.

2ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.

3ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.

4ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.

5ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.

Kannada Bible (Old Version), Bible Society of India.