2 ರಾಜರು 15

ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.

2 Kings 15:8 (UKJV) In the thirty and eighth year of Azariah king of Judah did Zachariah the son of Jeroboam reign over Israel in Samaria six months.

6ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

7ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.

8ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.

9ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.

Kannada Bible (Old Version), Bible Society of India.