1ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
2ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.