2 ರಾಜರು 16

ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.

2 Kings 16:6 (UKJV) At that time Rezin king of Syria recovered Elath to Syria, and drove the Jews from Elath: and the Syrians came to Elath, and dwelt there unto this day.

4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.

5ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.

6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.

7ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.

8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.

Kannada Bible (Old Version), Bible Society of India.