2 ರಾಜರು 17

ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--

2 Kings 17:11 (UKJV) And there they burnt incense in all the high places, as did the heathen whom the LORD carried away before them; and wrought wicked things to provoke the LORD to anger:

9ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.

10ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ

11ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--

12ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.

13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.

Kannada Bible (Old Version), Bible Society of India.