2 ರಾಜರು 17

ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ

2 Kings 17:16 (UKJV) And they left all the commandments of the LORD their God, and made them molten images, even two calves, and made a grove, and worshipped all the host of heaven, and served Baal.

14ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು

15ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.

16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ

17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.

18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.

Kannada Bible (Old Version), Bible Society of India.