2 ರಾಜರು 17

ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.

2 Kings 17:18 (UKJV) Therefore the LORD was very angry with Israel, and removed them out of his sight: there was none left but the tribe of Judah only.

16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ

17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.

18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.

19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.

20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.

Kannada Bible (Old Version), Bible Society of India.