2 ರಾಜರು 17

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.

2 Kings 17:2 (UKJV) And he did that which was evil in the sight of the LORD, but not as the kings of Israel that were before him.

11 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.

2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.

3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.

4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.

Kannada Bible (Old Version), Bible Society of India.