2 ರಾಜರು 17

ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.

2 Kings 17:20 (UKJV) And the LORD rejected all the seed of Israel, and afflicted them, and delivered them into the hand of spoilers, until he had cast them out of his sight.

18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.

19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.

20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.

21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.

22ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.

Kannada Bible (Old Version), Bible Society of India.