2 ರಾಜರು 17

ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.

2 Kings 17:29 (UKJV) Nevertheless every nation made gods of their own, and put them in the houses of the high places which the Samaritans had made, every nation in their cities wherein they dwelt.

27ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.

28ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.

29ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.

30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.

31ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

Kannada Bible (Old Version), Bible Society of India.