2 ರಾಜರು 17

ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.

2 Kings 17:3 (UKJV) Against him came up Shalmaneser king of Assyria; and Hoshea became his servant, and gave him presents.

11 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.

2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.

3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.

4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.

5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.

Kannada Bible (Old Version), Bible Society of India.