30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
31ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
32ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
34ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.