37ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
38ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ
39ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
40ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.
41ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.