2 ರಾಜರು 17

ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.

2 Kings 17:7 (UKJV) For so it was, that the children of Israel had sinned against the LORD their God, which had brought them up out of the land of Egypt, from under the hand of Pharaoh king of Egypt, and had feared other gods,

5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.

6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

7ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.

8ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.

9ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.

Kannada Bible (Old Version), Bible Society of India.