2 ರಾಜರು 19

ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.

2 Kings 19:1 (UKJV) And it came to pass, when king Hezekiah heard it, that he rent his clothes, and covered himself with sackcloth, and went into the house of the LORD.

1ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.

2ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.

3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.

Kannada Bible (Old Version), Bible Society of India.