2 ರಾಜರು 19

ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.

2 Kings 19:17 (UKJV) Truthfully, LORD, the kings of Assyria have destroyed the nations and their lands,

15ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.

16ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.

17ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.

18ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.

19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.

Kannada Bible (Old Version), Bible Society of India.