2 ರಾಜರು 19

ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.

2 Kings 19:18 (UKJV) And have cast their gods into the fire: for they were no gods, but the work of men's hands, wood and stone: therefore they have destroyed them.

16ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.

17ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.

18ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.

19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.

20ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--

Kannada Bible (Old Version), Bible Society of India.