2 ರಾಜರು 19

ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.

2 Kings 19:22 (UKJV) Whom have you reproached and blasphemed? and against whom have you exalted your voice, and lifted up yours eyes on high? even against the Holy One of Israel.

20ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--

21ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.

22ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.

23ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.

24ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.

Kannada Bible (Old Version), Bible Society of India.