2 ರಾಜರು 19

ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.

2 Kings 19:24 (UKJV) I have dug and drunk strange waters, and with the sole of my feet have I dried up all the rivers of besieged places.

22ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.

23ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.

24ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.

25ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.

26ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.

Kannada Bible (Old Version), Bible Society of India.