2 ರಾಜರು 19

ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.

2 Kings 19:30 (UKJV) And the remnant that is escaped of the house of Judah shall yet again take root downward, and bear fruit upward.

28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.

29ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.

30ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.

31ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್‌ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.

32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.

Kannada Bible (Old Version), Bible Society of India.