6ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
7ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.