2 ರಾಜರು 2

ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.

2 Kings 2:1 (UKJV) And it came to pass, when the LORD would take up Elijah into heaven by a whirlwind, that Elijah went with Elisha from Gilgal.

1ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.

2ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.

3ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.

Kannada Bible (Old Version), Bible Society of India.