9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
10ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
13ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.