2 ರಾಜರು 20

ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--

2 Kings 20:2 (UKJV) Then he turned his face to the wall, and prayed unto the LORD, saying,

1ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.

2ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--

3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.

4ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ--

Kannada Bible (Old Version), Bible Society of India.