2 ರಾಜರು 20

ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.

2 Kings 20:3 (UKJV) I plead to you, O LORD, remember now how I have walked before you in truth and with a perfect heart, and have done that which is good in your sight. And Hezekiah wept sore.

1ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.

2ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--

3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.

4ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ--

5ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.

Kannada Bible (Old Version), Bible Society of India.