2 ರಾಜರು 20

ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.

2 Kings 20:5 (UKJV) Return, and tell Hezekiah the captain of my people, Thus says the LORD, the God of David your father, I have heard your prayer, I have seen your tears: behold, I will heal you: on the third day you shall go up unto the house of the LORD.

3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.

4ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ--

5ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.

6ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.

7ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.

Kannada Bible (Old Version), Bible Society of India.