7ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
8ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
9ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
10ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
11ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.