2 ರಾಜರು 23

ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ

2 Kings 23:13 (UKJV) And the high places that were before Jerusalem, which were on the right hand of the mount of corruption, which Solomon the king of Israel had built for Ashtoreth the abomination of the Zidonians, and for Chemosh the abomination of the Moabites, and for Milcom the abomination of the children of Ammon, did the king defile.

11ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.

12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.

13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ

14ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

15ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.

Kannada Bible (Old Version), Bible Society of India.